ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ.

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ.

24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರ ಹ*.

ಬಾಂಗ್ಲಾದೇಶ : ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ಹಠಾತ್ತನೆ ನಡೆದಿದ್ದು, ದಾಳಿಕೋರರು ಕೂಡಲೇ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ರಾಜಧಾನಿ ಢಾಕಾಗೆ ಸಮೀಪದಲ್ಲಿರುವ ಈ ಘಟನೆ ಇನ್ನಷ್ಟು ಆಘಾತಕಾರಿಯಾಗಿದೆ.

ಈ ಕೊಲೆ 18 ದಿನಗಳಲ್ಲಿ ನಡೆದ ಆರನೇ ಹಿಂದೂ ವ್ಯಕ್ತಿಯ ಕೊಲೆಯಾಗಿದೆ. ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ಸಂಜೆ 6 ಗಂಟೆ ಸುಮಾರಿಗೆ, ಜಶೋರ್ ಜಿಲ್ಲೆಯ ಮಣಿರಾಂಪುರ ಉಪಜಿಲ್ಲಾದ ಕೊಪಾಲಿಯಾ ಬಜಾರ್‌ನಲ್ಲಿ 45 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ರಾಣಾ ಪ್ರತಾಪ್ ಐಸ್ ಕಾರ್ಖಾನೆಯನ್ನು ಹೊಂದಿದ್ದರು ಮತ್ತು ನರೈಲ್ ಜಿಲ್ಲೆಯಿಂದ ಪ್ರಕಟವಾಗುವ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರೂ ಆಗಿದ್ದರು.

ಸ್ಥಳೀಯ ನಿವಾಸಿಗಳ ಪ್ರಕಾರ, ಕೆಲವು ಪುರುಷರು  ಬೈಕ್​ನಲ್ಲಿ ಬಂದು ಅವರನ್ನು ಕಾರ್ಖಾನೆಯಿಂದ ಹೊರಗೆಳೆದು, ಒಂದು ಗಲ್ಲಿಗೆ ಕರೆದೊಯ್ದು ಅವರ ತಲೆಗೆ ಹಲವು ಬಾರಿ ಗುಂಡು ಹಾರಿಸಿದ್ದರು. ಅಷ್ಟೇ ಅಲ್ಲದೆ ಕುತ್ತಿಗೆ ಕೊಯ್ದು ಪರಾರಿಯಾಗಿದ್ದರು. ಪೊಲೀಸರು ದೇಹದಿಂದ ಏಳು ಖಾಲಿ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ರಾಣಾ ಪ್ರತಾಪ್ ಅವರ ತಲೆಗೆ ಮೂರು ಗುಂಡುಗಳು ತಗುಲಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *