ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಪತ್ನಿ ಬಿ.ಎಂ.ಪಾರ್ವತಿ ಅವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕಿನಿಂದ ಅವರು ಬಳಲುತ್ತಿದ್ದು, ಈಗ ಚೇತರಿಕೆ ಕಾಣುತ್ತಿದ್ದಾರೆ.
ಇನ್ನೂ 2-3 ದಿನ ಆಸ್ಪತ್ರೆಯಲ್ಲಿರಬೇಕಾಗುತ್ತೆ ಎಂದು ವೈದ್ಯರು ತಿಳಿಸಿರೋದಾಗಿ ಅಪೋಲೋ ಆಸ್ಪತ್ರೆ ಬಳಿ ಸಿದ್ದರಾಮಯ್ಯ ಹೇಳಿದ್ದಾರೆ. ಪಾರ್ವತಿ ಅವರಿಗೆ ಐಸಿಯುನಲ್ಲಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಡಾ. ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಅವರಿಗೆ ಟ್ರೀಟ್ಮೆಂಟ್ ನೀಡುತ್ತಿದೆ.
For More Updates Join our WhatsApp Group :
