ಯುದ್ಧ ಪರಿಣಾಮ: ಯಾದಗಿರಿಯಲ್ಲಿ 28 ರೈಸ್ ಮಿಲ್ಗಳಿಗೆ ಭಾರೀ ಹೊಡೆತ

ಯುದ್ಧ ಪರಿಣಾಮ: ಯಾದಗಿರಿಯಲ್ಲಿ 28 ರೈಸ್ ಮಿಲ್ಗಳಿಗೆ ಭಾರೀ ಹೊಡೆತ

ಗಲ್ಫ್ ರಾಷ್ಟ್ರಗಳಿಗೆ ಅಕ್ಕಿ ರಫ್ತು ನಿಲ್ಲಲು ಮಿಲ್ ಮಾಲೀಕರು ಸಂಕಷ್ಟದಲ್ಲಿ ಇದ್ದಾರೆ

ಯಾದಗಿರಿ: ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಇದೀಗ ಗಲ್ಫ್ ರಾಷ್ಟ್ರಗಳ ಮೇಲಷ್ಟೇ ಅಲ್ಲದೆ ಭಾರತದ ಕೆಲವು ಉದ್ಯಮಗಳ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈಗಾಗಲೆ ಬೆಂಗಳೂರು ಸೇರಿ ದೇಶದ ಹಲವೆಡೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತಲೆಯಿತ್ತಿದೆ. ಅದಲ್ಲದೆ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಅಕ್ಕಿ ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ರೈಸ್ ಮಿಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ಹಲವಾರು ಮಿಲ್‌ಗಳು ಬಂದ್ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ವ್ಯಾಪಾರವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಮಿಲ್ ಮಾಲೀಕರು

ಯಾದಗಿರಿ ಜಿಲ್ಲೆಯಲ್ಲಿ ಬೆಳೆಯುವ ಸೋನಾ ಮಸೂರಿ ಅಕ್ಕಿಗೆ ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. ಜಿಲ್ಲೆಯಿಂದ ವಿವಿಧ ಮಹಾನಗರಗಳ ಮೂಲಕ ಈ ಅಕ್ಕಿಯನ್ನು ವಿದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ವಿಶೇಷವಾಗಿ ಸೌದಿ ಅರೇಬಿಯಾ, ದುಬೈ, ಕುವೈತ್ ಸೇರಿದಂತೆ ಹಲವು ಗಲ್ಫ್ ರಾಷ್ಟ್ರಗಳಿಗೆ ಅಕ್ಕಿ ಸಾಗಾಟ ನಡೆಯುತ್ತಿತ್ತು. ಪ್ರತಿದಿನವೂ ಯಾದಗಿರಿಯಿಂದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಕ್ವಿಂಟಲ್ ಅಕ್ಕಿ ವಿದೇಶಗಳಿಗೆ ರಫ್ತು ಆಗುತ್ತಿತ್ತು. ಆದರೆ ಇತ್ತೀಚೆಗೆ ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಗಲ್ಫ್ ರಾಷ್ಟ್ರಗಳ ವ್ಯಾಪಾರ ಚಟುವಟಿಕೆಗಳು ಕುಂಠಿತಗೊಂಡಿದ್ದು, ಅಕ್ಕಿ ರಫ್ತು ಸಂಪೂರ್ಣವಾಗಿ ನಿಂತಿದೆ.

ಜಿಲ್ಲೆಯಿಂದ ರಫ್ತಾಗುವ ಅಕ್ಕಿಯ ಪ್ರಮಾಣವೆಷ್ಟು?

ಇನ್ನೊಂದೆಡೆ ಮಿಲ್ ಮಾಲೀಕರು ಬ್ಯಾಂಕ್ ಸಾಲ, ವಿದ್ಯುತ್ ಬಿಲ್ ಸೇರಿದಂತೆ ಹಲವು ಖರ್ಚುಗಳನ್ನು ನಿರ್ವಹಿಸಲು ಪರದಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಅಕ್ಕಿ ಉದ್ಯಮವೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಮಿಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ, ದೂರದ ಮಧ್ಯಪ್ರಾಚ್ಯದ ಯುದ್ಧದ ಪರಿಣಾಮ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೂ ಹೊಡೆತ ನೀಡಿದ್ದು, ರಫ್ತು ಮತ್ತೆ ಆರಂಭವಾಗುವವರೆಗೆ ಉದ್ಯಮಿಗಳು ಹಾಗೂ ಕಾರ್ಮಿಕರು ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *