ಎಫ್‌ಎಸ್‌ಎಸ್‌ಎಐಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ.
ಬೆಂಗಳೂರು: ಮಾರುಕಟ್ಟೆಯಲ್ಲಿ ಮಾವು, ಬಾಳೆಹಣ್ಣು ಮತ್ತು ಪಪ್ಪಾಯಿ ಸೇರಿದಂತೆ ವಿವಿಧ ಹಣ್ಣುಗಳನ್ನು ಕೃತಕವಾಗಿ ಹಣ್ಣು ಮಾಡಲು ಕ್ಯಾಲ್ಸಿಯಂ ಕಾರ್ಬೈಡ್‌ನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುತ್ತಿರುವುದರ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಕಟ್ಟುನಿಟ್ಟಿನ ತಪಾಸಣೆ ನಡೆಸಿ, ಕಾನೂನುಬಾಹಿರವಾಗಿ ಹಣ್ಣು ಮಾಡುವ ಏಜೆಂಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲ ರಾಜ್ಯಗಳ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಆದೇಶ ನೀಡಿದೆ.
ಕೆಮಿಕಲ್‌ನಿಂದ ಕ್ಯಾನ್ಸರ್ ಸಾಧ್ಯತೆ
ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವುದನ್ನು ಎಫ್‌ಎಸ್‌ಎಸ್‌ಎಐ ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ಈ ರಾಸಾಯನಿಕವು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದೆ. ಕ್ಯಾಲ್ಸಿಯಂ ಕಾರ್ಬೈಡ್ ನೀರಿನೊಂದಿಗೆ ಸಂಪರ್ಕಕ್ಕೆ ಬಂದಾಗ ಬಿಡುಗಡೆಯಾಗುವ ಅಸೆಟಿಲೀನ್ ಅನಿಲವು ಆರ್ಸೆನಿಕ್ ಮತ್ತು ಫಾಸ್ಫರಸ್‌ನಂತಹ ವಿಷಕಾರಿ ಅಂಶಗಳನ್ನು ಹೊಂದಿರುತ್ತದೆ. ಇವುಗಳ ಸೇವನೆಯಿಂದ ವಾಂತಿ, ಅತಿಸಾರ, ಎದೆ ಉರಿ ಮತ್ತು ದೀರ್ಘಕಾಲದ ಬಳಕೆಯಿಂದ ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳು ಬರುವ ಸಾಧ್ಯತೆ ಇರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.
For More Updates Join our WhatsApp Group :



