ವಾಷಿಂಗ್ಟನ್ || ನೆತನ್ಯಾಹು ಭೇಟಿ ಬೆನ್ನಲ್ಲೇ ಗಾಜಾದ ಮೇಲೆ ಕಣ್ಣಿಟ್ಟ ಅಮೆರಿಕ – ಟ್ರಂಪ್‌ ಕೊಟ್ಟ ಆಫರ್‌ ಏನು?

ವಾಷಿಂಗ್ಟನ್ || ನೆತನ್ಯಾಹು ಭೇಟಿ ಬೆನ್ನಲ್ಲೇ ಗಾಜಾದ ಮೇಲೆ ಕಣ್ಣಿಟ್ಟ ಅಮೆರಿಕ – ಟ್ರಂಪ್ ಕೊಟ್ಟ ಆಫರ್ ಏನು?

ವಾಷಿಂಗ್ಟನ್: ಕೆಲ ದಿನಗಳ ಹಿಂದೆಯಷ್ಟೇ ಇಸ್ರೇಲ್‌-ಹಮಾಸ್‌ ನಡುವಿನ ಕದನ ವಿರಾಮದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಇದೀಗ ಗಾಜಾ ಪಟ್ಟಿಯ (Gaza Strip) ಮೇಲೆ ಕಣ್ಣಿಟ್ಟಿದ್ದಾರೆ. ಟ್ರಂಪ್‌ ಅವರ ಈ ಹೊಸ ಪ್ರಸ್ತಾಪ ವಿಶ್ವವನ್ನೇ ನಿಬ್ಬೆರಗಾಗುವಂತೆ ಮಾಡಿದೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರ ಶ್ವೇತಭವನದ ಭೇಟಿಯ ಸಮಯದಲ್ಲಿ ಗಾಜಾವನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳುವ ಪ್ರಸ್ತಾವವನ್ನು ಟ್ರಂಪ್ ಮಂಡಿಸಿದ್ದಾರೆ. ಟ್ರಂಪ್ ಆವರ ಆಫರ್ ಅನ್ನು ಎರಡು ರಾಷ್ಟ್ರಗಳು ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ, ಯುದ್ದ ಪೀಡಿತ ಪ್ರದೇಶದಿಂದ ಹೊರಕ್ಕೆ ಹೋಗಬೇಕು ಮತ್ತು ಈಜಿಪ್ಟ್ ಅಥವಾ ಜೋರ್ಡಾನ್ ಮುಂತಾದ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಪ್ಯಾಲೆಸ್ತೀನಿಯನ್ನರು ಸ್ಥಳಾಂತರಗೊಳ್ಳಬೇಕು ಎಂದು ಟ್ರಂಪ್‌ ಒತ್ತಾಯಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ನೆತನ್ಯಾಹು ಜೊತೆಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್‌, ಗಾಜಾವನ್ನು ಅಮೆರಿಕ ತಮ್ಮ ಸುಪರ್ದಿಗೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

Leave a Reply

Your email address will not be published. Required fields are marked *