ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್ಗೆ ಪ್ರಯಾಣಿಕರಿದ್ದ ವಿಮಾನವೊಂದು ಡಿಕ್ಕಿ ಹೊಡೆದು ನದಿಗೆ ಬಿದ್ದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ.
ಅಮೆರಿಕ ಸೇನಾ ಹೆಲಿಕಾಪ್ಟರ್ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ ಬಿದ್ದಿದೆ. ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ
ಅಪಘಾತಕ್ಕೀಡಾದ ವಿಮಾನವು 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಕಾನ್ಸಾಸ್ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.