ಬಿಲ್ ಬಾಕಿ ಇರುವ ಗ್ರಾಹಕರಿಗೆ ಜಲಮಂಡಳಿಯಿಂದ ಬಡ್ಡಿ ಮನ್ನಾ – DCM

ಬಿಲ್ ಬಾಕಿ ಇರುವ ಗ್ರಾಹಕರಿಗೆ ಜಲಮಂಡಳಿಯಿಂದ ಬಡ್ಡಿ ಮನ್ನಾ – DCM

ಬಾಕಿ ಬಿಲ್ ಪಾವತಿಸಿದರೆ 100% ಬಡ್ಡಿ ಮನ್ನಾ.

ಬೆಂಗಳೂರು : ನಾಗರಿಕರಿಗೆ ಜಲಮಂಡಳಿಯಿಂದ ಸಿಹಿಸುದ್ದಿ ಲಭಿಸಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಡ್ಡಿ ಮನ್ನಾ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್  ತಿಳಿಸಿದ್ದಾರೆ.

ಬಾಕಿ ಇರುವ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ

ಮಾಧ್ಯಮ ಪ್ರಕಟಣೆ ಮೂಲಕ ಈ ಮಾಹಿತಿ ನೀಡಿರುವ ಅವರು, ಏಪ್ರಿಲ್ ತಿಂಗಳಿಂದ ಮೂರು ತಿಂಗಳ ಅವಧಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಬಾಕಿ ನೀರಿನ ಬಿಲ್ ಪಾವತಿಸಿದರೆ ಶೇ100ರಷ್ಟು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ.

ಮೂರು ತಿಂಗಳಷ್ಟೇ ಅವಕಾಶ

ಗೃಹ, ವಾಣಿಜ್ಯ ಹಾಗೂ ಕೈಗಾರಿಕಾ ಸೇರಿದಂತೆ ಎಲ್ಲಾ ವರ್ಗದ ಗ್ರಾಹಕರಿಗೂ ಈ ಸೌಲಭ್ಯ ಅನ್ವಯವಾಗಲಿದೆ. ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯ ಎಲ್ಲಾ ಬಳಕೆದಾರರು ಇದರ ಪ್ರಯೋಜನ ಪಡೆಯಬಹುದು.ಈ ವಿಶೇಷ ಅವಕಾಶವನ್ನು ಮುಂದಿನ ಮೂರು ತಿಂಗಳಲ್ಲಿ ಬಳಸಿಕೊಳ್ಳುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *