ಚಿಕ್ಕಬಳ್ಳಾಪುರ: ಧರ್ಮಸ್ಥಳ ಒಂದು ಶ್ರದ್ಧಾಕೇಂದ್ರ, ಮಂಜುನಾಥ ಸ್ವಾಮಿಯನ್ನು ಅಸಂಖ್ಯಾತ ಹಿಂದೂಗಳು ಆರಾಧಿಸುತ್ತಾರೆ, ಯಾರೋ ಒಬ್ಬರು ಶವಗಳನ್ನು ಹೂತಿದ್ದಾಗಿ ಹೇಳಿದ ಬಳಿಕ ಎಸ್ಐಟಿ ರಚನೆಯಾಗಿ ತನಿಖೆ ಶುರುವಾಗಿದೆ ಅದಕ್ಕೆ ತಮ್ಮ ವಿರೋಧವೇನೂ ಇಲ್ಲ, ಆದರೆ ಶವಗಳನ್ನು ಹೂತಿರುವೆನಂದು ಹೇಳಿರುವ ಸ್ಥಳಗಳಲ್ಲಿ ಉತ್ಖನನ ನಡೆಸಿ ಪರಿಶೀಲಿಸಲಾಗುತ್ತಿದೆ, 15 ಕಡೆ ತೋಡಿದರೂ ಒಂದು ಪುರುಷ ಅಸ್ಥಿಪಂಜರ ಮಾತ್ರ ಸಿಕ್ಕಿದೆ, ತನಿಖೆಯ ಭರದಲ್ಲಿ ಹಿಂದೂಗಳ ಭಾವನಗೆಗಳಿಗೆ ಧಕ್ಕೆಯಾಗಬಾರದು ಎಂದು ಯಲಹಂಕ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ತಮ್ಮ ಕ್ಷೇತ್ರದಿಂದ 200 ಕಾರುಗಳಲ್ಲಿ ನಾವು ಧರ್ಮಸ್ಥಳದೊಂದಿಗಿದ್ದ್ದೇವೆ ಎಂಬ ಘೋಷಣೆಯೊಂದಿಗೆ ಕಾರಿಗೆ ಕೇಸರಿ ಧ್ವಜ ಕಟ್ಟಿ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ, ಅಲ್ಲಿ ಪೂಜೆಯನ್ನು ನೆರವೇರಿಸಿಕೊಂಡು ಮರುದಿನ ವಾಪಸ್ಸು ಬರುತ್ತೇವೆ ಎಂದು ವಿಶ್ವನಾಥ್ ಹೇಳಿದರು.
For More Updates Join our WhatsApp Group :