ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು:ಈಶ್ವರ ಖಂಡ್ರೆ

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು:ಈಶ್ವರ ಖಂಡ್ರೆ

ಪರಿಸರ ಸಂರಕ್ಷಣೆಯಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದು

ಬೆಂಗಳೂರು :  ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್.ಕೆ.ಸಿಸಿಐ) ಆಯೋಜಿಸಿದ್ದ ಜಾಗತಿಕ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಶೃಂಗಸಭೆ 2026ರ ಪೂರ್ವಭಾವಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ನಾವಿಂದು, ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯ ಪರಿಣಾಮಗಳ ಕಾಲಘಟ್ಟದಲ್ಲಿ ನಿಂತಿದ್ದು,  ಈ ಸಂದರ್ಭದಲ್ಲಿ ಸುಸ್ಥಿರ ಅಭಿವೃದ್ಧಿ, ಹವಾಮಾನ ಚೇತರಿಕೆ ಮತ್ತು ಸಮಗ್ರ ಪ್ರಗತಿಯ ಕಾರ್ಯತಂತ್ರಕ್ಕೆ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಚಾಲಕಶಕ್ತಿಯಾಗಿದೆ ಎಂದರು.

ಕರ್ನಾಟಕವು ಈ ಪಯಣದಲ್ಲಿ ವಿಶಿಷ್ಟ ಸ್ಥಾನದಲ್ಲಿದೆ. ಜಾಗತಿಕ ಜೀವವೈವಿಧ್ಯತೆಯ ಅದ್ಭುತ ತಾಣವಾದ ಪಶ್ಚಿಮ ಘಟ್ಟಗಳನ್ನು ಹೊಂದಿದ್ದು,  ಹಲವು ಬಗೆಯ ವಿಶಿಷ್ಟ ಸಸ್ಯ ಸಂಕುಲ, ಪ್ರಾಣಿ ಸಂಕುಲ, ಪಕ್ಷಿ ಸಂಕುಲ ಹಾಗೂ ಕೀಟ ಸಂಕುಲಗಳ ತಾಣವಾದ ಈ ಸಮೃದ್ಧ ಕಾನನವನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಪಶ್ಚಿಮ ಘಟ್ಟ ಭವಿಷ್ಯದ ಪೀಳಿಗೆಯ ಜೀವನಾಡಿ:ಈಶ್ವರ ಖಂಡ್ರೆ

ಹಲವು ಜೀವನದಿಗಳ ಮೂಲವೇ ಪಶ್ಚಿಮಘಟ್ಟವಾಗಿದ್ದು, ಮಳೆಯ ಮಾರುತಗಳನ್ನು ತಡೆದು ದೇಶಾದ್ಯಂತ ವ್ಯಾಪಕವಾಗಿ ಮಳೆ ಸುರಿಸುವಂತೆ ಮಾಡುವ ಪಶ್ಚಿಮ ಘಟ್ಟಗಳನ್ನು ಉದ್ದಿಮೆದಾರರು ಕೇವಲ ಒಂದು ಸಂಪನ್ಮೂಲವಾಗಿ ನೋಡದೆ, ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು ಎಂದು ಹೇಳಿದರು.ಅಧ್ಯಕ್ಷರಾದ ಉಮಾರೆಡ್ಡಿ, ನವ್ ಕಿಸ್ಲೆ, ಸಾಯಿಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *