ಪತ್ನಿ ವಿಚ್ಛೇದನ ಕೇಳಿದ್ದಕ್ಕೆ ಪತಿ ಮಾಡಿದ್ದೇನು?

ಪತ್ನಿ ವಿಚ್ಛೇದನ ಕೇಳಿದ್ದಕ್ಕೆ ಪತಿ ಮಾಡಿದ್ದೇನು?

ಮುಂಬೈ : ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಕೇಸ್ಗಳು ತುಂಬಾನೇ ಹೆಚ್ಚುತ್ತಿದೆ. ಮುಂಬೈನ ಮಲಾಡ್ ನಲ್ಲಿ 27 ವರ್ಷದ ಮಹಿಳೆ ತನ್ನ ಪತಿಗೆ ವಿಚ್ಛೇದನ ಕೇಳಿರುವ ಬೆನ್ನಲ್ಲೇ ಪತ್ನಿ ಮೇಲೆ ಪತಿ ಆಸಿಡ್ ಎರಚಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬೇರೊಂದು ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿರುವ ವಿಚಾರ ತಿಳಿದು ಪತ್ನಿಯು ಪತಿಯೊಂದಿಗೆ ವಿಚ್ಛೇದನ ಕೇಳಿದರು. ಸಂತ್ರಸ್ತೆಯು ಸೆಪ್ಟೆಂಬರ್ 25 ರಂದು ಮಲಾಡ್ ನಲ್ಲಿ ತನ್ನ ತಾಯಿಯ ನಿವಾಸದಲ್ಲಿದ್ದಾಗ ಆರೋಪಿ ಆಕೆಯ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಮಾರಿಸಿಕೊಂಡಿರುವ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಲಾಗುತ್ತಿದೆ ಪೊಲೀಸರು ತಲೆಮಾರಿಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *