ಬೆಂಗಳೂರು : ತುಂಗಭದ್ರಾ ಗೇಟ್ಗೆ ಒಂದೇ ಚೈನ್ ಇದ್ದ ಕಾರಣ ಅದು ಮುರಿದು ಬಿದ್ದಿದೆ. ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹೊಸಪೇಟೆಯ ನಾರಾಯಣ ಇಂಜಿನಿಯರ್ಸ್ಗೆ ನಿನ್ನೆ ಭೇಟಿ ನೀಡಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನಿರ್ಮಾಣದ ಪ್ರಗತಿ ಪರಿಶೀಲನೆ ನಡೆಸಿ ಈ ಸಂಬಂಧ ಸಚಿವರು, ಶಾಸಕರು ಹಾಗೂ ಇಂಜಿನಿಯರ್ಗಳ ಜೊತೆ ಸಭೆ ನಡೆಸಿ ಡಿಸಿಎಂ ಡಿಕೆಶಿ ಮಾತನಾಡಿದರು.
ತುಂಗಭದ್ರಾ ಗೇಟ್ಗೆ ಒಂದೇ ಚೈನ್ ಇದ್ದ ಕಾರಣ ಅದು ಮುರಿದು ಬಿದ್ದಿದೆ. ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು . ಗೇಟ್ ನಿರ್ಮಾಣ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆಯುತ್ತಿದ್ದು, ಸದ್ಯದಲ್ಲೇ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ. ಕಳೆದ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಆಗಿದೆ. ರೈತರ ಬೆಳೆ ಉಳಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದೆ. ಬೇರೆ ಜಲಾಶಯಗಳಲ್ಲಿ ಕ್ರಸ್ಟ್ ಗೇಟ್ಗೆ ಎರಡು ರೀತಿಯ ಸುರಕ್ಷತೆಗೆ ಇರುತ್ತದೆ. ತುಂಗಭದ್ರಾ ಗೇಟ್ಗೆ ಒಂದೇ ಚೈನ್ ಇದ್ದ ಕಾರಣ ಅದು ಮುರಿದು ಬಿದ್ದಿದೆ. ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.