ನಿತಿನ್ ನಬಿನ್ ಕಾರ್ಯಾಧ್ಯಕ್ಷರಾಗಿ ನೇಮಕ.
ಬೆಂಗಳೂರು: ಬಹುದಿನಗಳಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯನ್ನು ಮುಂದೂಡುತ್ತಲೇ ಬರಲಾಗಿದೆ. ಆದರೆ, ಈಗ ದಿಢೀರ್ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ ನೇಮಕವಾಗಿದೆ. ಅದರಲ್ಲೂ ಅಚ್ಚರಿ ಎಂಬಂತೆ ಮೋದಿ ಹಾಗೂ ಅಮಿತ್ ಶಾ ಸೇರಿಕೊಂಡು ಅಚ್ಚರಿ ಎಂಬಂತೆ 45 ವರ್ಷದ ನಿತಿನ್ ನವೀನ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಬಿಜೆಪಿಯ ನೂತನ ಕಾರ್ಯಾಧ್ಯಕ್ಷನಿತಿನ್ ನಬಿನ್, ಪಕ್ಷದ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ವ್ಯಕ್ತಿಯಾಗಿದ್ದಾರೆ. ಇದಕ್ಕೂ ಮೊದಲು ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಹೀಗಾಗಿ ನಿತಿನ್ ನಬಿನ್ ಅವರೇ ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಎನ್ನಲಾಗಿದೆ. ಹೀಗಾಗಿ ಅವರನ್ನು ಮೊದಲಿಗೆ ಕಾರ್ಯಾಧ್ಯಕ್ಷರನ್ನಾಗಿ ಮಾಡಿ ಬಳಿಕ ನಡ್ಡಾ ಅವರ ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಹೀಗಾಗಿ ಕರ್ನಾಟಕ ಬಿಜೆಪಿಯಲ್ಲೂ ಸಹ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಅಧಿವೇಶ ಬಿಟ್ಟು ದೆಹಲಿಗೆ ಹಾರಿದ್ದಾರೆ. ನೂತನ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ವಿಜಯೇಂದ್ರ ದೆಹಲಿಗೆ ತೆರಳಿರುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ವಿಜಯೇಂದ್ರ ಮೊದಲೇ ಮುಂದಿನ ರಾಷ್ಟ್ರೀಯಅ ಅಧ್ಯಕ್ಷರ ಎಂದು ಹೇಳಲಾಗಿರುವ ನಿತಿನ್ ನಬಿನ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ.
For More Updates Join our WhatsApp Group :




