ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾನೆ. ಈ ಬಗ್ಗೆ ಈಗಾಗಲೇ ಹಲವರು ಸಿನಿ ತಾರೆಯರು, ರಾಜಕೀಯ ಗಣ್ಯರು ಪ್ರತಿಕ್ರಿಯಿಸಿದ್ದಾರೆ. ಹಾಗೆಯೇ ಇದೀಗ ನಿರ್ಮಾಪಕ ಸಾ.ರಾ.ಗೋವಿಂದು ಪ್ರತಿಕ್ರಿಯಿಸಿದ್ದಾರೆ.ಹಾಗಾದರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗಾಗಲೇ ದರ್ಶನ್ ಪರ-ವಿರೋಧ ಚರ್ಚೆಗಳು ಸಾಮಾಜಿಕ ಜಲಾತಾಣಗಳಲ್ಲಿ ನಡೆಯುತ್ತಿವೆ. ಇನ್ನು ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮಾತನಾಡಿದ್ದು, ಸಿನಿಮಾ ರಂಗದಲ್ಲಿ ನಟ ದರ್ಶನ್ ಅವರು ನಡೆದುಬಂದ ಹಾದಿ, ಅವರ ಹಿಂದಿನ ವಿವಾದಗಳು, ಇದೀಗ ನಡೆದಿರುವ ಘಟನೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ.
“ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್ ಸೇರಿದಂತೆ ಹಲವು ಮಹಾನ್ ನಟರ ಆದರ್ಶಗಳನ್ನು ನಟ ದರ್ಶನಗ್ ಪಾಲನೆ ಮಾಡಬೇಕಿತ್ತು. ಅದೂ ಇಷ್ಟ ಇಲ್ಲ ಅಂದರೆ ಅವರ ತಂದೆಯ ಆದರ್ಶಗಳನ್ನಾದರೂ ಪಾಲನೆ ಮಾಡಬೇಕಿತ್ತು,” ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಪಾಲಾಗಿದ್ದಾರೆ. ವಿಚಾರಣಾಧೀನ ಕೈದಿಯಾಗಿ ಜುಲೈ 4ರ ವರೆಗೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಸಮಯ ದೂಡಬೇಕಿದೆ. ಆ ಬಳಿಕವೂ ಅವರಿಗೆ ಜಾಮೀನು ಸಿಗುವುದು ಅನುಮಾನ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ. ಏಕೆಂದರೆ ಈಗಾಗಲೇ ಪೊಲೀಸರು ಸುಮಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.