ಬಿ.ವೈ ವಿಜಯೇಂದ್ರ ಹೇಳಿದ ತಕ್ಷಣ ರಾಜೀನಾಮೆ ಕೊಡೋಕೆ ಆಗುತ್ತಾ? ಜಮೀರ್ ಅಹ್ಮದ್

ಬಿ.ವೈ ವಿಜಯೇಂದ್ರ ಹೇಳಿದ ತಕ್ಷಣ ರಾಜೀನಾಮೆ ಕೊಡೋಕೆ ಆಗುತ್ತಾ? ಜಮೀರ್ ಅಹ್ಮದ್

ವಿಜಯಪುರ : ದಸರಾ ಮುಗಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದು, ಬಿವೈ ವಿಜಯೇಂದ್ರ ಹೇಳಿದ ತಕ್ಷಣ ರಾಜೀನಾಮೆ ಕೊಡೋಕೆ ಆಗುತ್ತಾ?

ಮುಂದಿನ 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.

ದಸರಾ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಬಿ ವೈ ವಿಜಯೇಂದ್ರ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದು, ವಿಜಯೇಂದ್ರ ಏನು ಕಾಂಗ್ರೆಸ್ ಹೈಕಮಾಂಡಾ? ಬಿವೈ ವಿಜಯೇಂದ್ರ ಹೇಳಿದಾಗ ರಾಜೀನಾಮೆ ಕೊಡುವುದಕ್ಕೆ ಆಗುತ್ತಾ? ರಾಹುಲ್, ಸೋನಿಯಾ, ಮಲ್ಲಿಕಾರ್ಜುನ ಖರ್ಗೆ ಅವ್ರೆ ನಮ್ಮ ಹೈಕಮಾಂಡ್ ಎಂದರು.

ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಜೊತೆಗಿದ್ದೇವೆ ಎಂದು ಹೇಳಿದ್ದಾರೆ. ಪಕ್ಷದ ವಿಚಾರ ಹೇಳೋಕೆ ಬಿ ವೈ ವಿಜಯೇಂದ್ರ ಯಾರು? ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ರಾಜೀನಾಮೆ ಇಲ್ಲ ಎಂದು ಕೆ ಸಿ ವೇಣುಗೋಪಾಲ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ ಎಂದು ವಿಜಯಪುರದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.

ಇನ್ನು ಕಾರ್ಯಕ್ರಮ ಒಂದರಲ್ಲಿ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಭಿಮಾನಿಗಳು ಕೂಗಿದ ತಕ್ಷಣ ಸಿಎಂ ಆಗಿಬಿಡುತ್ತಾರಾ? ನನ್ನ ಅಭಿಮಾನಿಗಳು ಕೂಡ ಘೋಷಣೆ ಕೂಗುತ್ತಾರೆ.ಹಾಗೆ ಕೂಗಿದ ತಕ್ಷಣ ನಾನು ಸಿಎಂ ಆಗಿಬಿಡುತ್ತೇನ? ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *