ರಾಜ್ಯದಲ್ಲಿ ಡಿ.17 ರಿಂದ ವ್ಯಾಪಕ ಮಳೆ ಮುನ್ಸೂಚನೆ: ಹೆಚ್ಚಾಗುತ್ತಿರುವ ಚಳಿಯ ವಾತಾವರಣ

ಬೆಂಗಳೂರು : ಕರ್ನಾಟಕದಲ್ಲಿ ಹಿಂಗಾರು ಮಳೆ ಮುಂದಿನ ಡಿಸೆಂಬರ್ 17 ರಿಂದ ಮೂರು ದಿನ ಮತ್ತೆ ಜೋರಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಆರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬರಲಿದೆ. ನಂತರ ಕೆಲವು ದಿನ ಬಿಟ್ಟು ಡಿಸೆಂಬರ್ 17 ರಿಂದ ಮತ್ತೆ ಮಳೆಯ ಅಬ್ಬರವಿರಲಿದೆ. ಆಗ ಉತ್ತರ ಒಳನಾಡಿಗೆ ಮಳೆ ಮುನ್ಸೂಚನೆ ಇಲ್ಲ, ಬದಲಾಗಿ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಆಗುವ ಲಕ್ಷಣಗಳು ಇವೆ ಎಂದು ಹೇಳಿದೆ.

ಯುವಕ

ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕ ಮಗಳೂರು, ಮೈಸೂರು, ರಾಮನಗರ ಈ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಮಳೆ ಆಗಲಿದೆ. ಒಂದೆರಡು ಕಡೆಗಳಲ್ಲಿ ಸಾಧಾರಣಕ್ಕಿಂತ ಅತ್ಯಧಿಕ ಪ್ರಮಾಣದ ಮಳೆ ಆಗಲಿದೆ ಎಂದು ತಿಳಿಸಿದೆ.

ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ.

ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Pragati TV Social Connect for more latest u

Leave a Reply

Your email address will not be published. Required fields are marked *