ಚಿಕ್ಕಮಗಳೂರು : ಲವ್ವರ್ ಜೊತೆ ಸೇರಿ ಪತಿಯ ಹತ್ಯೆಗೆ ಸ್ಕೆಚ್ ಹಾಕಿದ್ದ ಪತ್ನಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಅನೈತಿಕ ಸಂಬಂಧದ ಗುಟ್ಟು ಬಯಲಾಗುತ್ತೆ ಎಂದು ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿ ಮೀನಾಕ್ಷಿಯನ್ನು ಅರೆಸ್ಟ್ ಮಾಡಲಾಗಿದೆ. ಆ ಮೂಲಕ ಕಡೂರು ಪೊಲೀಸರ ನಿರಂತರ ತನಿಖೆಯಿಂದ ಎರಡು ತಿಂಗಳ ಬಳಿಕ ಹತ್ಯೆ ಕಹಾನಿಯ ಅಸಲಿ ಸತ್ಯ ಬಯಲಾಗಿದೆ.
ಅನೈತಿಕ ಸಂಬಂಧದ ಗುಟ್ಟು ಎಲ್ಲಿ ಬಯಲಾಗುತ್ತೆ ಎಂದು ಸ್ಕೆಚ್ ಹಾಕಿ ತನ್ನ ಗಂಡನನ್ನು ಪ್ರಿಯಕರನಿಂದ ಕೊಲೆ ಮಾಡಿಸಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಎರಡು ತಿಂಗಳ ಬಳಿಕ ಹತ್ಯೆಯ ಅಸಲಿ ಕಹಾನಿಯನ್ನು ಕಡೂರು ಪೊಲೀಸರು ಬೇಧಿಸಿದ್ದಾರೆ. ಈ ಪ್ರಕರಣದಲ್ಲಿ ಮುಂಚೆ ಮೂವರ ಬಂಧನವಾಗಿತ್ತು
ಗಂಡನ ಕೊಲೆಗೆ ಪತ್ನಿ ಸ್ಕೆಚ್
55 ವರ್ಷದ ಮೀನಾಕ್ಷಿ ಮತ್ತು 33 ವರ್ಷದ ಪ್ರದೀಪ್ ಮಧ್ಯೆ ಲವ್ವಿ-ಡವ್ವಿ ನಡೆದಿತ್ತು. ಈ ಅನೈತಿಕ ಸಂಬಂಧದ ಗುಟ್ಟು ಎಲ್ಲಿ ಬಯಲಾಗುತ್ತೆ ಎಂದು ತನ್ನ ಗಂಡನ ಕೊಲೆಗೆ ಪತ್ನಿ ಸ್ಕೆಚ್ ಹಾಕಿದ್ದಳು. ಪ್ರದೀಪ್ ಜೊತೆಗಿನ ಅನೈತಿಕ ಸಂಬಂಧದ ಬಗ್ಗೆ ಇತ್ತ ಸುಬ್ರಹ್ಮಣ್ಯಗೂ ಅನುಮಾನ ಮೂಡಿತ್ತು. ಹೀಗಾಗಿ ಸುಬ್ರಹ್ಮಣ್ಯನನ್ನು ಹತ್ಯೆ ಮಾಡುವಂತೆ ಪ್ರದೀಪ್ಗೆ ಮೀನಾಕ್ಷಿ ತಿಳಿಸಿದ್ದಳು. ಅವಳ ಸೂಚನೆ ಮೇರೆಗೆ ಸ್ನೇಹಿತರ ಜೊತೆ ಸೇರಿ ಪ್ರದೀಪ್ ಹತ್ಯೆ ಮಾಡಿದ್ದ.
For More Updates Join our WhatsApp Group :