ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) 2 ದಿನಗಳ ಪ್ರವಾಸಕ್ಕೆ ಮೈಸೂರಿಗೆ ಆಗಮಿಸಿದ್ದಾರೆ. ಏರ್‌ಪೋರ್ಟ್‌ನಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ಭಾಗಿಯಾಗಿದ್ದರು.
ಮೊದಲು ಭಾಷಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ (Siddaramaiah), ನಿಮಗೆ ಕನ್ನಡ ಬರುತ್ತಾ ಎಂದು ಪ್ರಶ್ನಿಸಿ, ಐ ಸ್ಪೀಕ್ ಕನ್ನಡ ಅಂದ್ರು. ಕೊನೆಯಲ್ಲಿ ಸಿಎಂ ಪ್ರಶ್ನೆಗೆ ಉತ್ತರ ಕೊಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು, ಭಾರತದಲ್ಲಿ ಎಷ್ಟು ಭಾಷೆಗಳಿವೆ? ಎಷ್ಟು ಸಂಸ್ಕೃತಿಗಳಿವೆ? ಎಷ್ಟು ಪರಂಪರೆಗಳಿವೆ, ಅವೆಲ್ಲವೂ ನನಗಿಷ್ಟ. ಕನ್ನಡವು (Kannada Language) ಸ್ವಲ್ಪ ಸ್ವಲ್ಪ ಅರ್ಥ ಆಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದ್ರು
ಮಂಗಳವಾರವಾದ ನಾಳೆ ಮೈಸೂರು ಅರಮನೆಗೆ ಭೇಟಿ ಕೊಟ್ಟು, ರಾಜಮನೆತನ ಆತಿಥ್ಯ ಸ್ವೀಕರಿಸಲಿದ್ದಾರೆ. ಮಧ್ಯಾಹ್ನದ ನಂತರ ದೆಹಲಿಗೆ ವಾಪಸ್ ಆಗಲಿದ್ದಾರೆ.




