ನವದೆಹಲಿ: ದೇಶದಲ್ಲಿ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳು (Electric Vehicle) ರಸ್ತೆಗಳಿಯುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಜನರಿಗೆ ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಹೆಚ್ಚಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬೇಡಿಕೆ ಕಡಿಮೆಯಾಗುತ್ತಾ ಎನ್ನುವ ಆತಂಕವೂ ಹೆಚ್ಚುತ್ತಿದೆ.
ಈತನ್ಮಧ್ಯೆ ಕೇಂದ್ರ ಸಚಿವರು (Nithin Gadkari) ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೌದು.. 64 ನೇ ಎಸಿಎಂಎ ವಾರ್ಷಿಕ ಅಧಿವೇಶನದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ. ಸರಕಾರವೂ ಈ ವಾಹನಗಳ ಮೇಲೆ ನಿರಂತರವಾಗಿ ಗಮನ ಹರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 2 ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಿಗೆ ಸಮನಾಗಿರುತ್ತದೆ ಎಂದು ಹೇಳಿದ್ದಾರೆ.
‘ವಿತ್ತ ಸಚಿವರು ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡುವುದರಲ್ಲಿ ಯಾವುದೇ ತೊಂದರೆ ಇಲ್ಲ’ ಎಂದು ಹೇಳಿರುವ ನಿತಿನ್ ಗಡ್ಕರಿ, ಇವಿ ತಯಾರಕರಿಗೆ ಇನ್ನು ಮುಂದೆ ಸಬ್ಸಿಡಿಗಳ ಅಗತ್ಯವಿಲ್ಲ ಎಂದು ಅವರು ಈ ಹಿಂದೆ ಸೂಚಿಸಿದ್ದರು ಏಕೆಂದರೆ ಅವರ ಉತ್ಪಾದನಾ ವೆಚ್ಚವು ಕಡಿಮೆಯಾಗಿದೆ ಮತ್ತು ಗ್ರಾಹಕರು ಈಗ ಎಲೆಕ್ಟ್ರಿಕ್ ವಾಹನಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ, ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆ ಪಾಲು ಶೇಕಡಾ 6.3 ರಷ್ಟಿತ್ತು, ಇದು ಹಿಂದಿನ ವರ್ಷಕ್ಕಿಂತ 50 ಶೇಕಡಾ ಹೆಚ್ಚಾಗಿದೆ ಎಂದು ಹೇಳಿದರು.
‘ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬೇಕು’
ನಾನು ಪೆಟ್ರೋಲ್ ಮತ್ತು ಡೀಸೆಲ್ಗೆ ವಿರೋಧಿಯಲ್ಲ, ಆದರೆ ಭಾರತವು ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಇದರೊಂದಿಗೆ ಎಲೆಕ್ಟ್ರಿಕ್ ವಾಹನಗಳು ಮತ್ತು ಎಥೆನಾಲ್ನಂತಹ ಜೈವಿಕ ಇಂಧನಗಳ ಅಳವಡಿಕೆಗೆ ಗಡ್ಕರಿ ಒತ್ತು ನೀಡಬೇಕು ಎಂದರು.
ಎಥೆನಾಲ್ ಉತ್ಪಾದನೆಯಿಂದ ರೈತರಿಗೆ ಲಾಭ
ಅಷ್ಟೇ ಅಲ್ಲ, ಇತ್ತೀಚೆಗಷ್ಟೇ ಬಿಡುಗಡೆಯಾದ ವಿಶ್ವದ ಮೊದಲ ಸಿಎನ್ಜಿ ಬೈಕ್ ಬಜಾಜ್ ಸಿಎನ್ಜಿಯ ಉದಾಹರಣೆಯನ್ನು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಈ ಬೈಕ್ನ ಬೆಲೆ ಕಿ.ಮೀಗೆ 1 ರೂಪಾಯಿ ಆದರೆ ಪೆಟ್ರೋಲ್ ಬೈಕ್ನ ಬೆಲೆ 2 ರೂಪಾಯಿಗಿಂತ ಹೆಚ್ಚು, ಎಥೆನಾಲ್ ಉತ್ಪಾದನೆಯಿಂದ ರೈತರಿಗೆ ಲಾಭವಾಗುತ್ತಿದೆ. ಜೈವಿಕ ಇಂಧನವಾಗಿ ಎಥೆನಾಲ್ಗೆ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಜೋಳದ ಬೆಲೆ ದ್ವಿಗುಣಗೊಂಡಿದೆ ಎಂದು ಅವರು ಹೇಳಿದರು. 64 ನೇ ಎಸಿಎಂಎ ವಾರ್ಷಿಕ ಅಧಿವೇಶನದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.