ಪತಿಯನ್ನು ಬಿಡಿಸುವ ನೆಪದಲ್ಲಿ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ.
ಮಂಗಳೂರು: ದೂರು ಕೊಡಲೆಂದು ಪೊಲೀಸ್ ಠಾಣೆಗೆ ಹೋಗಿದ್ದ ಮಹಿಳೆಗೆ ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಸುಳ್ಳು ಕೇಸ್ ನಲ್ಲಿ ಬಂಧನಕ್ಕೊಳಗಾದ ಪತಿಯನ್ನು ಬಿಡುಗಡೆ ಮಾಡುವಂತೆ ಮಹಿಳೆ, ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿದ್ದು, ಈ ವೇಳೆ ಇನ್ಸ್ಪೆಕ್ಟರ್ ಸಂದೇಶ, ಪತಿಯನ್ನು ಬಿಡುಗಡೆ ಮಾಡಲು 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.
ಮಹಿಳೆಯ ಆರೋಪವೇನು?
ಪ್ರಕರಣವೊಂದರಲ್ಲಿ ಮೂಡಬಿದ್ರೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದು, ಸಂಬಂಧ ಬಂಧಿತ ವ್ಯಕ್ತಿಯ ಪತ್ನಿ ಪೊಲೀಸ್ ಠಾಣೆಗೆ ತೆರಳಿ ತಮ್ಮ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾಳೆ. ಈ ವೇಳೆ ಇನ್ಸ್ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದು ಸ್ವತಃ ಮಹಿಳೆಯೇ ಆರೋಪಿಸಿದ್ದಾರೆ. ತಿಯನ್ನು ಬಿಡಬೇಕಂದ್ರೆ ಲೈಂಗಿಕವಾಗಿ ಸಹಕರಿಸು. ಇಲ್ಲ 25 ಲಕ್ಷ ರೂಪಾಯಿ ಕೊಡಬೇಕು. ಇಲ್ಲಿ ಪೋಸ್ಟ್ಗಾಗಿ ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಹಣ ಕೊಡದಿದ್ರೆ ನಿನ್ನ ಪತಿ ಮೇಲೆ ರೌಡಿಶೀಟ್ ಓಪನ್ ಮಾಡುತ್ತೇನೆ ಎಂದು ಇನ್ಸ್ಪೆಕ್ಟರ್ ಸಂದೇಶವನ್ನ ಬೆದರಿಕೆ ಹಾಕಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.
ನೂರಾರು ಮಹಿಳೆಯರು ಇದೇ ರೀತಿ ನನ್ನ ಜೊತೆಗೆ ಇದ್ದಾರೆ. ಅವರಂತೆ ನೀನು ಕೂಡ ಲೈಂಗಿಕವಾಗಿ ಸಹಕರಿಸು. ಇಲ್ಲದಿದ್ರೆ ಡ್ರಗ್ಸ್ ಪೆಡ್ಲರ್ಗಳಿಗೆ ಹೇಳಿ ನಿನ್ನ ಮರ್ಯಾದೆ ತೆಗೆಯುತ್ತೇನೆ ಎಂದು ಇನ್ಸ್ಪೆಕ್ಟರ್ ಸಂದೇಶ್ ಧಮ್ಕಿ ಹಾಕಿದ್ದಾಗಿ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಈ ಸಂಬಂಧ ಮಹಿಳೆ, ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೂ ಯಾವುದೇ ಉಪಯೋಗವಾಗಿಲ್ಲ. ಪಿಐ ಸಂದೇಶ ಮೇಲೆ ಮೇಲಾಧಿಕಾರಿಗಳಿಗಳ ಕೃಪಾಕಟಾಕ್ಷ ಇದೆ. ಹೀಗಾಗಿ ಅವರ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಮಹಿಳೆ ಆರೋಪ ಮಾಡಿದ್ದಾರೆ.
For More Updates Join our WhatsApp Group :



