ಬ್ಯಾಡರಹಳ್ಳಿ ಲ್ಯಾಬ್ ಸಿಬ್ಬಂದಿ ವಿರುದ್ಧ FIR ದಾಖಲು; ಮಹಿಳೆ ಗಂಭೀರ ದೂರು
ಬೆಂಗಳೂರು : ನಗರದ ಬ್ಯಾಡರಹಳ್ಳಿ ವ್ಯಾಪ್ತಿಯ ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ತಪಾಸಣೆಗೆ ಬಂದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಲಾಗಿದೆ ಹಾಗೂ ಜೀವ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಲ್ಯಾಬ್ ಮ್ಯಾನೇಜರ್ ಪ್ರಭಾಕರ್ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ಥೈರಾಯ್ಡ್ ಪರೀಕ್ಷೆಗಾಗಿ ಲ್ಯಾಬ್‌ಗೆ ತೆರಳಿದಾಗ ರಕ್ತದ ಮಾದರಿ ಸಂಗ್ರಹಿಸುವ ವೇಳೆ ಅಸಭ್ಯ ಮತ್ತು ಬೇಜವಾಬ್ದಾರಿ ವರ್ತನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನೋವು ಆಗುತ್ತಿದೆ ಎಂದು ಹೇಳಿದರೂ ನಿರ್ಲಕ್ಷ್ಯ ವಹಿಸಿ ಬಲವಂತವಾಗಿ ರಕ್ತ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ನಂತರ ಮಹಿಳೆ ಪ್ರಶ್ನಿಸಿದಾಗ ಸಿಬ್ಬಂದಿ ಆಕೆಯ ಮನೆಗೆ ಬಂದು ವಿಷಯವನ್ನು ಹೊರಗೆ ಹೇಳಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು FIRನಲ್ಲಿ ಉಲ್ಲೇಖಿಸಲಾಗಿದೆ.
ದೂರು ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ FIR ದಾಖಲಿಸಿದ್ದಾರೆ.
ಆರೋಗ್ಯ ಸೇವಾ ಕೇಂದ್ರದಲ್ಲೇ ಇಂತಹ ಘಟನೆ ನಡೆದಿರುವುದು ಮಹಿಳಾ ಸುರಕ್ಷತೆ ಮತ್ತು ವೈದ್ಯಕೀಯ ಸಿಬ್ಬಂದಿಯ ವರ್ತನೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
For More Updates Join our WhatsApp Group :




