“ಸಮಾನತೆ ಹಕ್ಕಿಗೆ ವಿರುದ್ಧ” ಎಂದು ರದ್ದುಪಡಿಸಲು ಮನವಿ.
ಬೆಂಗಳೂರು : ರಾಜ್ಯ ಸರ್ಕಾರ ಮಹಿಳಾ ನೌಕರರ ಆರೋಗ್ಯ ಮತ್ತು ಕಾರ್ಯದಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಋತುಚಕ್ರ ರಜೆ ಸೌಲಭ್ಯವನ್ನು ನೀಡಿದೆ. ಈ ಬಗ್ಗೆ ಇತ್ತೀಚೆಗೆ ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದರು. ಈ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರದ ಮೂಲಕ ಮನವಿ ಮಾಡಲಾಗಿತ್ತು. ಈ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ ಋತುಚಕ್ರ ರಜೆ ಪ್ರಶ್ನಿಸಿ ವಿವಿಧ ಕಂಪನಿಗಳ ಮಹಿಳಾ ಉದ್ಯೋಗಿಗಳಿಂದಲೇ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಆದೇಶ ರದ್ದುಪಡಿಸುವಂತೆ ಮನವಿ ಮಾಡಲಾಗಿದೆ.
ಋತುಚಕ್ರದ ಕಾರಣಕ್ಕೆ ಕಡ್ಡಾಯ ರಜೆ ಅಗತ್ಯ
ಕಡ್ಡಾಯ ಋತುಚಕ್ರ ರಜೆ ಆದೇಶ ರದ್ದುಪಡಿಸುವಂತೆ ಶ್ರೀಮತಿ ವರ್ಷಾ ಸೇರಿ ವಿವಿಧ ಕಂಪನಿಗಳ 17 ಮಹಿಳೆಯರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಆದೇಶ ಸಮಾನತೆ ಹಕ್ಕಿಗೆ ವಿರುದ್ಧವಾಗಿದೆ. ಮಹಿಳಾ ಉದ್ಯೋಗಿಗಳ ನೇಮಕಕ್ಕೆ ಕಂಪನಿಗಳು ಹಿಂದೇಟು ಹಾಕುತ್ತಾರೆ. ಮಹಿಳೆಯರು ಪುರುಷರಿಗಿಂತ ದುರ್ಬಲರೆಂದು ಭಾವಿಸುತ್ತಾರೆ. ಹೀಗಾಗಿ ಋತುಚಕ್ರದ ಕಾರಣಕ್ಕೆ ಕಡ್ಡಾಯ ರಜೆ ನೀಡುವ ಅಗತ್ಯವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಸರ್ಕಾರದ ಕ್ರಮ ಲಿಂಗ ತಾರತಮ್ಯಗೆ ಎಡೆ ಮಾಡಿಕೊಡುತ್ತದೆ. ಪ್ರತಿ ಮಹಿಳೆಗೂ ಋತುಚಕ್ರ ರಜೆ ಬೇಕೆಂದು ಸರ್ಕಾರ ಊಹೆ ಮಾಡಿದೆ. ನೀತಿ ರೂಪಿಸುವಾಗ ಸರ್ಕಾರ ಮಹಿಳೆಯರ ಅಭಿಪ್ರಾಯ ಪಡೆದಿಲ್ಲ. ಕಡ್ಡಾಯ ರಜೆಯಿಂದ ಸ್ಪರ್ಧಾತ್ಮಕ ವೃತ್ತಿಜೀವನದಲ್ಲಿ ಮಹಿಳೆಯರಿಗೆ ಹಿನ್ನಡೆ ಉಂಟಾಗಲಿದೆ.
ಉದ್ಯೋಗದಾತರಿಗೆ ಹೊರೆ ಹೆಚ್ಚುತ್ತದೆ ಮತ್ತು ದಕ್ಷತೆ ಕಡಿಮೆಯಾಗುತ್ತದೆ. ಮಹಿಳೆಯರ ಸಬಲೀಕರಣಕ್ಕೂ ಋತುಚಕ್ರ ರಜೆ ಅಡ್ಡಿಯಾಗುತ್ತದೆ. ಹೀಗಾಗಿ ಕಡ್ಡಾಯ ಋತುಚಕ್ರ ರಜೆ ಆದೇಶ ರದ್ದುಪಡಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
For More Updates Join our WhatsApp Group :




