ಅಬ್ಬಬ್ಬಾ… Tomatoes ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

ಅಬ್ಬಬ್ಬಾ… Tomatoes ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

ಭಾರತೀಯರ ಪ್ರತಿ ಮನೆಯಲ್ಲಿಯೂ ಟೊಮೇಟೊ ಇಲ್ಲದೆಯೇ ಅಡುಗೆ ತಯಾರಾಗುವುದೇ ಇಲ್ಲ. ಇದು ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ, ನಮ್ಮ ಆರೋಗ್ಯಕ್ಕೂ ಕೂಡ ಬಹಳ ಪ್ರಯೋಜನಕಾರಿ. ಇದರಲ್ಲಿರುವ ಆರೋಗ್ಯಕರ ಗುಣಗಳು ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ನಾವು ದಿನನಿತ್ಯ ಬಳಕೆ ಮಾಡುವ ಈ ತರಕಾರಿಯಲ್ಲಿ ಇಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದರೆ ನಿಮಗೆ ಆಶ್ಚರ್ಯವಾಗಬಹುದು. ಹಾಗಾದರೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಿ.

ಟೊಮೇಟೊ! ಈ ಹೆಸರನ್ನು ಕೇಳದವರೇ ಇಲ್ಲ. ಟೊಮೇಟೊ/ ಗೂರೆ ಹಣ್ಣು  ಸೋಲನೇಸಿ ಕುಟುಂಬಕ್ಕೆ ಸೇರಿದ ಒಂದು ಗಿಡ. ಭಾರತೀಯರ ಪ್ರತಿ ಮನೆಯಲ್ಲಿಯೂ ಈ ತರಕಾರಿ ಇಲ್ಲದೆಯೇ ಅಡುಗೆ ತಯಾರಾಗುವುದಿಲ್ಲ. ಹಾಗಾಗಿಯೇ ಇದನ್ನು ಪ್ರತಿ ಖಾದ್ಯದಲ್ಲೂ ಬಳಸಲಾಗುತ್ತದೆ. ಇದು ಯಾವುದೇ ಅಡುಗೆ ಇರಲಿ ತನ್ನದೇ ಆದಂತಹ ರುಚಿ ನೀಡಿ ಅಡುಗೆಯ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಹಾಗಾದರೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ? ಟೊಮೇಟೊ ಸೇವನೆಯನ್ನು ಯಾರು ತಪ್ಪಿಸಬೇಕು? ಸಂಪೂರ್ಣ ವಿವರ ಇಲ್ಲಿದೆ.

ಟೊಮೇಟೊ ಸೇವಿಸುವುದರಿಂದ ಸಿಗುವ ಪ್ರಯೋಜನ

ಟೊಮೇಟೊದಲ್ಲಿ ಲೈಕೋಪೀನ್ ಎಂಬ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಿದೆ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಾತ್ರವಲ್ಲ ಹೃದಯಕ್ಕೆ ಹಾನಿ ಮಾಡುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಟೊಮೇಟೊದಲ್ಲಿ ಕಂಡು ಬರುವ ಪೊಟ್ಯಾಸಿಯಮ್ ಅಂಶ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಿಂದ ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಬರುವ ಅಪಾಯ ಕೂಡ ಕಡಿಮೆಯಾಗುತ್ತದೆ.

ಕಣ್ಣಿನ ಆರೋಗ್ಯಕ್ಕೆ ಸಹಕಾರಿ

ಟೊಮೇಟೊಗಳು ವಿಟಮಿನ್ ಎ ಜೊತೆಗೆ ಲುಟೀನ್, ಬೀಟಾ- ಕ್ಯಾರೋಟಿನ್ ಮತ್ತು ಜಿಯಾಕ್ಸಾಂಥಿನ್ ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಇವು ನಮ್ಮ ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಡಿಜಿಟಲ್ ಸಾಧನಗಳಿಂದ ಹೊರಸೂಸುವ ನೀಲಿ ಬೆಳಕಿನಿಂದಲೂ ಕಣ್ಣುಗಳನ್ನು ರಕ್ಷಿಸಲು ಸಹಾಯ ಮಾಡುತ್ತವೆ.

ಕ್ಯಾನ್ಸರ್ ತಡೆಗಟ್ಟುವಿಕೆ

ಟೊಮೇಟೊದಲ್ಲಿ ಕಂಡು ಬರುವ ಲೈಕೋಪೀನ್ ಕ್ಯಾನ್ಸರ್ ತಡೆಗಟ್ಟುವಿಕೆಗೂ ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ. ಪ್ರಾಸ್ಟೇಟ್, ಶ್ವಾಸಕೋಶ, ಹೊಟ್ಟೆ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ಗಳ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹಲವಾರು ಅಧ್ಯಯನಗಳಿಂದ ತಿಳಿದು ಬಂದಿದೆ.

ನಮ್ಮ ಚರ್ಮಕ್ಕೆ ಒಳ್ಳೆಯದು

ಟೊಮೇಟೊಗಳು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿವೆ. ಹೆಚ್ಚುವರಿಯಾಗಿ, ಅವು ಲೈಕೋಪೀನ್ ಅನ್ನು ಸಹ ಹೊಂದಿರುತ್ತವೆ. ಇವೆರಡೂ ಚರ್ಮದ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತವೆ. ಈ ಎರಡು ಅಂಶಗಳು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುತ್ತವೆ, ಪರಿಣಾಮವಾಗಿ ಚರ್ಮ ಆರೋಗ್ಯಕರವಾಗಿರುತ್ತದೆ. ಮಾತ್ರವಲ್ಲ ಯೌವ್ವನದಿಂದ ಕೂಡಿರುತ್ತದೆ. ಜೊತೆಗೆ, ಸೂರ್ಯನ ಬೆಳಕಿನಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸಲು ಮತ್ತು ಚರ್ಮದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹ ಇವು ಸಹಾಯ ಮಾಡುತ್ತವೆ.

Leave a Reply

Your email address will not be published. Required fields are marked *