ಬೆಂಗಳೂರು: ಮಲ್ಲೇಶ್ವರಂ ಲಿಂಕ್ ರಸ್ತೆಯಲ್ಲಿ ಇಂದು ಬೆಳಗ್ಗೆ ಅಚ್ಚರಿ ಹುಟ್ಟಿಸುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಮಿನಿ ಲಾರಿಯೊಂದು ನೇರವಾಗಿ ಕಾಂಡಿಮೆಂಟ್ಸ್ ಅಂಗಡಿಗೆ ನುಗ್ಗಿದೆ. ಸದ್ಯದ ಅದೃಷ್ಟವೆಂದರೆ, ಯಾವುದೇ ಪ್ರಾಣಾಪಾಯವಾಗಿಲ್ಲ.
ಘಟನೆ ಬಳಿಕ ಲಾರಿಯ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಅಪಘಾತದಿಂದ ಅಂಗಡಿಯಲ್ಲಿ ಸಾವಿರಾರು ರೂಪಾಯಿಗಳಷ್ಟು ನಷ್ಟ ಉಂಟಾಗಿದೆ.ಮಲ್ಲೇಶ್ವರಂ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಚಾಲಕನ ಪತ್ತೆಗಾಗಿ ತನಿಖೆ ಮುಂದುವರಿದಿದೆ.
For More Updates Join our WhatsApp Group :




