ಯಾದಗಿರಿ || ಜಾತಿ ನಿಂದನೆಗೆ ಹೆದರಿ Son ಆತ್ಮ*ಹತ್ಯೆ: ಸುದ್ದಿ ತಿಳಿದು Heart attack ತಂದೆ ಕೂಡ ಸಾ*..!

ಯಾದಗಿರಿ || ಜಾತಿ ನಿಂದನೆಗೆ ಹೆದರಿ Son ಆತ್ಮ*ಹತ್ಯೆ: ಸುದ್ದಿ ತಿಳಿದು Heart attack ತಂದೆ ಕೂಡ ಸಾ*..!

ಯಾದಗಿರಿ: ಜಾತಿ ನಿಂದನೆ ಕೇಸ್ಗೆ ಹೆದರಿ ಮಗ ಆತ್ಮಹತ್ಯೆ ಮಾಡಿಕೊಂಡರೆ, ಮಗನ ಸಾವಿನ ಸುದ್ದಿ ತಿಳಿದು ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ನಡೆದಿದೆ. ಮರಕ್ಕೆ ನೇಣುಬಿಗಿದುಕೊಂಡು ಮೆಹಬೂಬ್(22) ಆತ್ಮಹತ್ಯೆಗೆ ಶರಣಾಗಿದ್ದು, ಹೃದಯಾಘಾತದಿಂದ ತಂದೆ ಸೈಯದ್ ಅಲಿ(50) ಸಾವನ್ನಪ್ಪಿದ್ದಾರೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಬೇರೆಯವರ ಜಮೀನಿನ ಮೂಲಕ ತನ್ನ ಜಮೀನಿಗೆ ನಡೆದುಕೊಂಡು ಹೋಗುವ ವಿಚಾರವಾಗಿ ಕಳೆದ ಒಂದು ವಾರದ ಹಿಂದೆ ವಡಗೇರ ಪಟ್ಟಣದ ದಲಿತ ಕುಟುಂಬದ ಜೊತೆ ಜಗಳ ಉಂಟಾಗಿತ್ತು. ಜಗಳದ ಬಳಿಕ ಹಿರಿಯರು ಕುಳಿತು ನ್ಯಾಯ ಪಂಚಾಯತಿ ಮಾಡಿ ಬಗೆ ಹರಿಸಿದ್ದರು. ಆದರೆ ಬೇರೆ ಊರಿಂದ ಬಂದ ದಲಿತ ಮುಖಂಡ ಓರ್ವ ಜಾತಿ ನಿಂದನೆ ಕೇಸ್ ದಾಖಲು ಮಾಡಿ, ಜೈಲಿಗೆ ಕಳುಹಿಸುತ್ತೇನೆ ಅಂತ ಮೆಹಬೂಬ್ಗೆ ಬೆದರಿಕೆ ಹಾಕಿದ್ದರು.

Leave a Reply

Your email address will not be published. Required fields are marked *