ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರ ಬಳಿಕ ಭಾರಿ ಮಳೆಯಾಗಲಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ತಿಡಗುಂಡಿ, ಬಿಳಗಿ, ಕೆರೂರು, ಮಾನ್ವಿ, ಯಡ್ರಾಮಿ, ಕುಷ್ಟಗಿ, ಆಲಮಟ್ಟಿ, ದೇವರಹಿಪ್ಪರಗಿ, ಗುಳೇಗೋಡು, ಅಫ್ಝಲ್​ಪುರ, ಅಣ್ಣಿಗೆರೆ, ಬೆಳ್ಳೂರು, ಗುರುಮಿಟ್ಕಲ್, ಸೈದಾಪುರ, ಶೋರಾಪುರ, ಝಲ್ಕಿ, ಆಗುಂಬೆ, ಔರಾದ್, ಬಸವನಬಾಗೇವಾಡಿ, ಗಬ್ಬೂರು, ಗೋಪಾಲನಗರ, ಕೆಂಭಾವಿ, ಲೋಕಾಪುರ, ಸೇಡಂ, ವಿಜಯಪುರ, ಬೀದರ್, ಗದಗ, ಗಂಗಾವತಿ, ಗೋಕರ್ಣ, ಹುಂಚದಕಟ್ಟೆ, ಕಲಬುರಗಿ, ಕಮ್ಮರಡಿ, ಕೊಟ್ಟಿಗೆಹಾರ, ಕುರ್ಡಿ, ನಂಜನಗೂಡು, ಪುತ್ತೂರು, ರಾಯಲ್ಪಾಡು, ಪುತ್ತೂರು, ಯಲಬುರ್ಗಾದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಕೂಡ ಮಳೆಯಾಗಿದೆ. ಎಚ್​​ಎಎಲ್​​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *