ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ ನಾಳೆ ಮಳೆಯಾಗಲಿದ್ದು, 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ ಮಳೆಯಾಗಲಿದ್ದು, ಹಳೇ ಮೈಸೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದ್ದು, ಬೆಂಗಳೂರಲ್ಲೂ ವರುಣಾರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ ಗಾಳಿ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 17ರಿಂದ 19ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಭಾಗದಲ್ಲಿ ಸಾಧಾರಣ ಮಳೆಯನ್ನು ಅಂದಾಜಿಸಲಾಗಿದೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಬೆಂಗಳೂರಲ್ಲಿ ಗುಡುಗು ಸಹಿತ ಮಳೆ
ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗಲಿದೆ. ಶೇ.80ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 20-21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
For More Updates Join our WhatsApp Group :
