ವಿನಯ್ ಕುಲಕರ್ಣಿ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಿಕೆ.
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ. ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಭವಿಷ್ಯ ಇಂದು ನಿರ್ಧಾರವಾಗುವ ನಿರೀಕ್ಷೆಯಿತ್ತು, ಆದರೆ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ವಿಸ್ತೃತ ಪರಾಮರ್ಶೆಯ ಅಗತ್ಯವಿರುವುದರಿಂದ ಮುಂದೂಡಲಾಗಿದೆ.
ವಾದ-ಪ್ರತಿವಾದದ ಸಮಯದಲ್ಲಿ ಎರಡೂ ಕಡೆಯ ವಕೀಲರು ಸಾವಿರಾರು ಪುಟಗಳ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದ್ದು, ಪ್ರಕರಣದಲ್ಲಿ ಅನೇಕ ದಾಖಲೆಗಳು ಮತ್ತು ಸಾಕ್ಷ್ಯಗಳಿವೆ. ಇವೆಲ್ಲವನ್ನೂ ಪರಿಶೀಲಿಸಿ, ತೀರ್ಪಿನಲ್ಲಿ ಯಾವುದೇ ಗೊಂದಲಗಳಾಗದಂತೆ ತಿದ್ದುಪಡಿ ಕಾರ್ಯ ನಡೆಯುತ್ತಿದೆ. ಹೀಗಾಗಿ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ದೋಷಿ ಅಥವಾ ನಿರ್ದೋಷಿ ಎಂಬುದು ಸ್ಪಷ್ಟವಾಗಲಿದೆ.
For More Updates Join our WhatsApp Group :




