ಯುವಕರು ಮತ್ತು ಮಕ್ಕಳೂ ಸ್ಥಳದಲ್ಲೇ ಸಾ*.

ಯುವಕರು ಮತ್ತು ಮಕ್ಕಳೂ ಸ್ಥಳದಲ್ಲೇ ಸಾ*.

ಸೊಸೆ ಹುಟ್ಟುಹಬ್ಬಕ್ಕೆ ಹೋಗುತ್ತಿದ್ದವರು, ಶಾಲಾ ಬಸ್ಸಿನ ಪರಿಣಾಮ.

ಕೊಪ್ಪಳ : ಓವರ್​​ಟೇಕ್​ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಬಳಿ ನಡೆದಿದೆ. ಬೈಕ್​ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿ ಶ್ರೀನಿವಾಸ್​(26) ಮತ್ತು ಸಿದ್ದನಗೌಡ(25) ಮೃತಪಟ್ಟಿದ್ದಾರೆ. ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಅಂತ್ಯಕಂಡಿದ್ದಾರೆ. ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಸೊಸೆ ಬರ್ತ್​​ಡೇ ಹಿನ್ನೆಲೆ ಸ್ನೇಹಿತ ಸಿದ್ದನಗೌಡ ಜತೆ ಶ್ರೀನಿವಾಸ್ ತೆರಳುತ್ತಿದ್ದ. ಮುಸಲಾಪುರದಿಂದ  ಹಿರೇಅರಳಹಳ್ಳಿಗೆ ಬೈಕ್​ನಲ್ಲಿ ಇಬ್ಬರು ತೆರಳುತ್ತಿದ್ದ ವೇಳೆ ಮುಂದೆ ಹೋಗುತ್ತಿದ್ದ ಸ್ಟೀಲ್ ಕ್ವಾಯಿಲ್ ಸಾಗಿಸುತ್ತಿದ್ದ ಲಾರಿ ಓವರ್​​ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಲಾರಿ ಕೆಳಗಡೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತರು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ನಿವಾಸಿಗಳು ಎನ್ನಲಾಗಿದೆ.

ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವು

ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದಲ್ಲಿ ನಿನ್ನೆ ನಡೆದಿದೆ. ಗಾಜರಕೋಟ ಗ್ರಾಮದ ವಿಸ್ಡಮ್ ಶಾಲೆಯ ಪುನೀತ್ ಮೃತ ವಿದ್ಯಾರ್ಥಿ. ನಿನ್ನೆ ಶಾಲೆಯಿಂದ ಬಸ್​ನಲ್ಲಿ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಪುನೀತ್, ಬಸ್​ನಿಂದ ಕೆಳಗೆ ಇಳಿಯುತ್ತಿದ್ದಂತೆ ಡ್ರೈವರ್ ರಿವರ್ಸ್ ತೆಗೆದುಕೊಂಡಿದ್ದು, ಈ ವೇಳೆ ಬಸ್​ನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

ಪುನೀತ್ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು, ಮಗುವಿನ ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಬಸ್ ಡ್ರೈವರ್​ಗೆ ಜೀವಾವಧಿ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದು, ಪೊಲೀಸರ ಮನವೊಲಿಕೆ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *