ಹುಬ್ಬಳ್ಳಿಯಲ್ಲಿ ಮತಾಂತರ ಯತ್ನ ಆರೋಪ: ಯುವಕ ಪೊಲೀಸರ ವಶಕ್ಕೆ.

ಹುಬ್ಬಳ್ಳಿಯಲ್ಲಿ ಮತಾಂತರ ಯತ್ನ ಆರೋಪ: ಯುವಕ ಪೊಲೀಸರ ವಶಕ್ಕೆ.

ಜಿಮ್‌ನಲ್ಲಿ ಪರಿಚಯವಾದ ಯುವತಿಯೊಂದಿಗೆ ಸಂಬಂಧ ಬೆಳೆಸಿ ಮತಾಂತರ ಪ್ರಯತ್ನ ಆರೋಪ

ಹುಬ್ಬಳ್ಳಿ: ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್​​​ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್ ಮಾಡುತ್ತಿದ್ದಾನೆಂದು ಆರೋಪಿಸಲಾಗಿದೆ. ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *