ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಯಾಗುವ ಸಂಭಾವನೆ– ಅಧಿವೇಶನದ ಬಳಿಕ ಶುಭಸುದ್ದಿ?
ಬೆಳಗಾವಿ : ಶೀಘ್ರದಲ್ಲೇ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನ ಮುಗಿದ ನಂತರ ಡಿ.ಕೆ. ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ. ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಇಕ್ಬಾಲ್ ತಿಳಿಸಿದ್ದಾರೆ.
For More Updates Join our WhatsApp Group :




